ಕಾಮತೃಷೆಗಾಗಿ ಶೌಚಾಲಯ ಗೋಡೆಗೆನೇ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

Share the Article

ಕಾಮಕ್ಕೆ ಕಣ್ಣಿಲ್ಲ ಎಂದು ಹೇಳುವುದು ಇದಕ್ಕೆ ಇರಬೇಕು. ಈ ಲೈಂಗಿಕ ತೃಪ್ತಿಗಾಗಿ ಜನ ಏನೆಲ್ಲಾ ಕರಾಮತ್ತು ಮಾಡುತ್ತಾರೆ ಅನ್ನುವುದಕ್ಕೆ ಇದೊಂದು ತಾಜಾ ಘಟನೆ. ನಾವು ಸಾಮಾನ್ಯವಾಗಿ ಕಂಡಹಾಗೆ ಜನ ಈ ತೀಟೆ ತೀರಿಸಿಕೊಳ್ಳಲು, ವೇಶ್ಯಾಗೃಹ, ಪಾರ್ಕ್, ಪೊದೆಗಳ ಮಧ್ಯೆ, ಕಾಡಿಗೆ ಹೀಗೆ ಜನ ಇರದ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಇಲ್ಲೊಂದು ಆಶ್ಚರ್ಯಕರ ಘಟನೆ ನಡೆದಿದೆ.

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಗ್ರಾಹಕರಿಗೆ ವೇಶ್ಯಾವಾಟಿಕೆಗೆ ವ್ಯವಸ್ಥೆ ಮಾಡಿದ ಆಘಾತಕಾರಿ ರಹಸ್ಯ ದಾರಿ ಬಯಲಿಗೆ ಬಂದಿದೆ. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ.

ಚಿತ್ರದುರ್ಗ ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ ಇನ್ಸ್ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

Leave A Reply