ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಸ್ಯಾಂಡಲ್‌ವುಡ್‌ ಪೋಷಕ ನಟಿಗೆ ಅಪಘಾತ!!

Share the Article

ಬೆಂಗಳೂರು:ಸ್ಯಾಂಡಲ್‌ವುಡ್‌ ಪೋಷಕ ನಟಿ ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ,ಗಾಯಗೊಂಡ ಘಟನೆ ಎನ್ ಆರ್ ಕಾಲೋನಿ 9 ನೇ ಅಡ್ಡ ರಸ್ತೆಯಲ್ಲಿ ನಡೆದಿದೆ.

ಗಾಯಾಳು ನಟಿ ಸುನೇತ್ರಾ(40)ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ ನಟಿ ಸುನೇತ್ರಾ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ಕೂಡಲೇ ಸಹಾಯಕ್ಕೆ ಧಾವಿಸಿದ ಸ್ಥಳೀಯರಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುನೇತ್ರರವರು ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ರಸ್ತೆಯಲ್ಲಿನ ಅವೈಜ್ಞಾನಿಕ ಹಂಪ್ ಮತ್ತು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿದ್ದು, ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.ಸದ್ಯ ಬಸವನಗುಡಿಯ ಖಾಸಗಿ ಆಸ್ಪ್ರತ್ರೆಯಲ್ಲಿ ಸುನೇತ್ರಾಗೆ ಚಿಕಿತ್ಸೆ ಮುಂದುವರೆದಿದೆ.

Leave A Reply