ಮಂಗಳೂರು : ಬಲ್ಲಾಳ್‌ಭಾಗ್ ಸರಣಿ ಅಪಘಾತ ಪ್ರಕರಣ: ಚಾಲಕನ ಪರೀಕ್ಷಾ ವರದಿ ನೆಗೆಟಿವ್ !

Share the Article

ಮಂಗಳೂರು: ಬಲ್ಲಾಳ್ ಬಾಗ್ ನಲ್ಲಿ ಕಳೆದ ಎಪ್ರಿಲ್‌ನಲ್ಲಿ
ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು. ಅನಂತರ ಮಹಿಳೆ ಮೃತಪಟ್ಟಿದ್ದು ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಡ್ರಗ್ಸ್ ಅಥವಾ ಮದ್ಯ ಸೇವಿಸಿದ ಬಗ್ಗೆ ಸಂದೇಹ ಉಂಟಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ವೈದ್ಯಕೀಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಅತೀವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಕೆಲವು ದಿನಗಳ ಅನಂತರ ಮೃತಪಟ್ಟಿದ್ದರು.

Leave A Reply