ಬಂಟ್ವಾಳ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು

Share the Article

ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದ ಬೊಂಡಾಲದಲ್ಲಿ ನಡೆದಿದೆ.

ಗೋಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ನಾಗವೇಣಿ ಎಂಬುವವರ ಪುತ್ರಿ ಮಲ್ಲಿಕಾ (32) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮಲ್ಲಿಕಾ ಸುಮಾರು 10 ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply