ಮಂಗಳೂರು : ಪ್ರತಿಭಾವಂತ ಸ್ಯಾಕ್ಸೋಫೋನ್ ಕಲಾವಿದೆ ಆತ್ಮಹತ್ಯೆ!!!

Share the Article

ಮಂಗಳೂರು: ಸ್ಯಾಕ್ಸೋಫೋನ್ ಕಲಾವಿದೆಯೋರ್ವರು ಮಂಗಳವಾರ ಸಂಜೆ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ನಗರದ ಹೊರವಲಯದ ಶಕ್ತಿನಗರದ ಎಸ್.ಎಸ್.ಫ್ಲಾಟ್ ನಲ್ಲಿ ವಾಸ್ತವ್ಯವಿದ್ದ ಸ್ಯಾಕ್ಸೋಫೋನ್ ಕಲಾವಿದೆ ಸುಜಾತಾ ದೇವಾಡಿಗ (31) ಎಂಬುವರು ಮಂಗಳವಾರ ಸಂಜೆ ಫ್ಲಾಟ್ ನ ರೂಮ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ ಕಾರ್ಯಕ್ರಮ ಮುಗಿಸಿ ಬಂದು ಮನೆಯವರಲ್ಲಿ ತಲೆನೋವು ಎಂದು ಹೇಳಿ ರೂಮ್ ನಲ್ಲಿ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ 8.30 ಯಾದರೂ ಕೋಣೆಯಿಂದ ಹೊರಗೆ ಬಾರದಿದ್ದುದನ್ನು ಕಂಡು ಪತಿ ನಿತಿನ್ ಕಿಟಕಿಯಿಂದ ನೋಡಿದಾಗ ಸುಜಾತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Leave A Reply