Home Interesting ಅನ್ಯ ಜಾತಿಯ ಯುವತಿಯನ್ನು ಮದುವೆಯಾದ ಯುವಕ ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆಯಾದ!

ಅನ್ಯ ಜಾತಿಯ ಯುವತಿಯನ್ನು ಮದುವೆಯಾದ ಯುವಕ ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆಯಾದ!

Hindu neighbor gifts plot of land

Hindu neighbour gifts land to Muslim journalist

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು, ಆಕೆಯ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಕ್ಕೆ, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ.

ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ.

ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದು, ಈ ಮದುವೆಗೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಈ ವಿರೋಧದ ನಡುವೆಯೂ ಮದುವೆಯಾಗಿದ್ದರು. ಅಲ್ಲದೆ ಈ ದಂಪತಿಗೆ ಎರಡೂವರೆ ತಿಂಗಳ ಮಗುವಿದ್ದು, ನೀರಜ್​ ಪನ್ವಾರ್​ ಬೇಗುಂ ಬಜಾರ್​ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.

ಇದೇ ಸೇಡಿನಿಂದಲೋ ಏನೋ, ಐದು ಮಂದಿಯ ಗ್ಯಾಂಗ್​ ಯುವಕನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ. ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನೀರಜ್​ಗೆ ತಲೆ, ಎದೆ ಹಾಗೂ ಇನ್ನಿತರ ಭಾಗಗಳಿಗೆ ಇರಿದಿದ್ದು, ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ನೀರಜ್​ ಸಾವಿನ ಬಗ್ಗೆ ಆತನ ತಂದೆ ಮಾತನಾಡಿದ್ದು, ಪ್ರೇಮ ವಿವಾಹವಾಗಿದ್ದಕ್ಕೆ ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆತನಿಗೆ ಸಾಕಷ್ಟು ಬೆದರಿಕೆ ಕರೆಗಳು ಈ ಹಿಂದೆ ಬರುತ್ತಿದ್ದವು ಎಂದು ಆರೋಪಿಸಿದ್ದಾರೆ.

ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ.