ಕೇರಳದ ಯುವ ವೈದ್ಯೆ ವಿಸ್ಮಯಾ ವರದಕ್ಷಿಣೆ ಕಿರುಕುಳ ಸಾವು ಪ್ರಕರಣ: ಪತಿಯೇ ಅಪರಾಧಿ ಎಂದು ಮಹತ್ವದ ತೀರ್ಪು ನೀಡಿದ ಕೋರ್ಟ್!

ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾದ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ, ವಿಸ್ಮಯ ಆತ್ಮಹತ್ಯೆ ಪ್ರಕರಣದ ಅಂತಿಮ ತೀರ್ಪು ಕೋರ್ಟ್ ನೀಡಿದೆ.

 

ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ ನಾಯರ್ ಳ ಪತಿಯನ್ನು ಕೇರಳದ ನ್ಯಾಯಾಲಯವು ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಅಪರಾಧಿ ಎಂದು ಸೋಮವಾರ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಜಿತ್ ಕೆಎನ್ ರವರು, ಮೃತ ಯುವತಿಯ ಪತಿ ಎಸ್ ಕಿರಣ್ ಕುಮಾರ್ ನನ್ನು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ) ಮತ್ತು ಭಾರತೀಯ ದಂಡ ಸಂಹಿತೆಯ 304-ಬಿ (ವರದಕ್ಷಿಣೆ ಸಾವು) ಪ್ರಕರಣಗಳಡಿಯಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ.

ಶಿಕ್ಷೆಯ ಪ್ರಮಾಣವನ್ನು ಮಂಗಳವಾರ ಪ್ರಕಟಿಸಲಾಗುವುದು. ಮೇ 17ರಂದು ಪ್ರಕರಣದ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ವಿಸ್ಮಯಾ ಅವರ ತಂದೆ ತ್ರಿವಿಕ್ರಮನ್ ನಾಯರ್ ತಮ್ಮ ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ನ್ಯಾಯಾಲಯದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

Leave A Reply

Your email address will not be published.