Home Interesting ಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಜಿಲ್ಲಾಧಿಕಾರಿ!

ಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಜಿಲ್ಲಾಧಿಕಾರಿ!

Hindu neighbor gifts plot of land

Hindu neighbour gifts land to Muslim journalist

ರಾಯಚೂರು: ಗ್ರಾಹಕರಿಗೆ ಅಡುಗೆ ಅನಿಲದ ಬೆಲೆಯ ಜೊತೆಗೆ ಸರಬರಾಜುದಾರರಿಗೂ ಶುಲ್ಕ ನೀಡಬೇಕಾಗಿದ್ದು, ಇದು ಮತ್ತೊಂದು ಹೊಡೆತವಾಗಿತ್ತು. ಆದರೆ ಈಗ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ ಅವರು ಸಿಹಿಸುದ್ದಿ ತಿಳಿಸಿದ್ದಾರೆ.

ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದ್ದಾರೆ.

ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರ್ ಅನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡುವುದು ಗ್ಯಾಸ್ ಏಜೆನ್ಸಿಗಳ ಜವಾಬ್ದಾರಿ. ಆದ್ದರಿಂದ ಯಾವುದೇ ಕಾರಣಕ್ಕೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕರ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡುವಂತಿಲ್ಲ,

ಸಿಲಿಂಡರನ್ನು ಮನೆಗಳಲ್ಲಿ ಅಥವಾ ಎಷ್ಟೇ ಮಹಡಿ ಇದ್ದರೂ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಸಾರ್ವಜನಿಕರಲ್ಲಿ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳುವಂತಿಲ್ಲ. ಒಂದು ವೇಳೆ ಕೇಳಿದರೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ: 08532-231678 ಅಥವಾ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.