ಬಂಟ್ವಾಳ ರಸ್ತೆ ಅಪಘಾತ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು

Share the Article

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಘಟನೆಯಿಂದ ಮಹಿಳೆ ಮೃತಪಟ್ಟಿದ್ದಾರೆ.

ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಮೇ.26 ರಂದು ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ನಡೆದುಕೊಂಡು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕೆಯೊರ್ವಳಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

Leave A Reply