ಮದುವೆ ಸಮಾರಂಭದಲ್ಲಿ ಎಂಇಎಸ್ ಕಾರ್ಯಕರ್ತರು ಹಲ್ಲೆ ವಧುವರರಿಗೆ ಗಾಯ

ಬೆಳಗಾವಿ: ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆಗೈದಿದ್ದಾರೆ.

 

ಪ್ರಕರಣದಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವೋರ್ವನ ಸ್ಥಿತಿ ಗಂಭೀರವಾಗಿದೆ.

ವಧು–ವರನನ್ನು ಮೆರವಣಿಗೆ ಮೂಲಕ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಕನ್ನಡ ಬಾವುಟ ಹಿಡಿದುಕೊಂಡು ಕನ್ನಡ ಹಾಟುಗಳನ್ನು ಹಾಕಿ ಕುಣಿಯುತ್ತಿದ್ದೆವು. ಇದನ್ನು ನೋಡಿ ಸಹಿಸಲಾಗದ ಎಂಇಎಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.

ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಅವರು ಸ್ಪಂದಿಸುತ್ತಿಲ್ಲ.

ಎಂಇಎಸ್‌ ಕಾರ್ಯಕರ್ತರು ಹಲ್ಲೆ ಮಾಡಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.