ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ನಿಧನ

Share the Article

ಸುಳ್ಯ : ಪ್ರಗತಿಪರ ಕೃಷಿಕರು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಮ್ಮೂರಿನ ಮಾರ್ಗದರ್ಶಕರಾಗಿದ್ದ ತಿರುಮಲೇಶ್ವರ ಭಟ್ ಕಾನಾವು (70) ಮೇ 28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ, ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

Leave A Reply