ಪುತ್ತೂರು: ತಡರಾತ್ರಿ ಸ್ನೇಹಿತನನ್ನು ಮನೆಗೆ ಬಿಟ್ಟು ಬರುವಾಗ ಬೈಕ್ ಅಪಘಾತ!! ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Share the Article

ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮೃತರನ್ನು ಕಬಕ ಸಮೀಪದ ಅರ್ಕ ನಿವಾಸಿ ಸೇಸಪ್ಪ ನಾಯ್ಕ ರ ಪುತ್ರ ಕಿಶೋರ್ ಎಂದು ಗುರುತಿಸಲಾಗಿದೆ. ಕಿಶೋರ್ ಮೇ.27 ರಂದು ತಡರಾತ್ರಿ ಕಬಕದಿಂದ ತನ್ನ ಸ್ನೇಹಿತನನ್ನು ಕಲ್ಲಡ್ಕಕ್ಕೆ ಬಿಟ್ಟು ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದ ಕಿಶೋರ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕಿಶೋರ್ ಸಾವನ್ನಪ್ಪಿದ್ದಾನೆ.

Leave A Reply