ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ

ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ.

 

ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಬೀದರ ನಗರದ ಗುಂಪಾ ಪ್ರದೇಶದವರು ಆಗಿದ್ದಾರೆ.

ಉತ್ತರ ಪ್ರದೇಶದ ತೀರ್ಥ ಕ್ಷೇತ್ರಗಳಿಗೆ ಇಲ್ಲಿನ ಗುಂಪಾದ ಎರಡು ಕುಟುಂಬಗಳು ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದರು. ಬಹರಾಯಿಚ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ ಮತ್ತು ಲಖಿಮಪೂರ ಖಾರಿ ಕಡೆಯಿಂದ ಬರುತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೃತಪಟ್ಟವರನ್ನು ಶಿವಕುಮಾರ ಪೂಜಾರ (28), ಜಗದೇವಿ (52), ಮನ್ಮಥ (36), ಅನೀಲ ವಿಜಯಕುಮಾರ (30), ಸಂತೋಷ ಕಾಶಿನಾಥ (30), ಶಶಿಕಲಾ ರಾಜಕುಮಾರ (38) ಮತ್ತು ಸರಸ್ವತಿ ಜಗನ್ನಾಥ (47) ಎಂದು ಗುರುತಿಸಲಾಗಿದೆ.

Leave A Reply

Your email address will not be published.