ರಾಜ್ಯದಲ್ಲೊಂದು ಗ್ಯಾಂಗ್ ರೇಪ್ |ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮಾಂಧರರು

Share the Article

ಮಹಿಳೆಯರ ಮೇಲೆ ರೇಪ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸರಕಾರ ಯಾವುದೇ ಕಾನೂನು ಜಾರಿಗೆ ತಂದರೂ, ಕಾಮಾಂಧರರು ತಮ್ಮ ಅಟ್ಟಹಾಸ ಮೆರೆಯುತ್ತಲೇ ಇರುತ್ತಾರೆ.

ರಾಜ್ಯದಲ್ಲಿ ಈಗ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ವಿಕಲಚೇತನ ಯುವತಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಸದ್ಯ ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಯಶವಂತ ಪರಾರಿಯಾಗಿದ್ದಾನೆ. ಯಶವಂತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply