ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿಯರು | ತರಗತಿ‌ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Share the Article

ಮಂಗಳೂರು: ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್ ವಿವಾದ ಮುಂದುವರಿದಿದೆ.

ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್‌ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಒಳ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರವಷ್ಟೇ ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಜಾಬ್ ಗೆ ಅವಕಾಶ ಕೊಡಬೇಡಿ ಎಂದು ಪಟ್ಟು ಹಿಡಿದ ಇತರ ವಿದ್ಯಾರ್ಥಿಗಳು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಸುದ್ದಿ ಮಾಡಲು ಹೋದ ಮಾಧ್ಯಮದವರ ಮೇಲೆ ಒಂದು ಗುಂಪು ಹಲ್ಲೆ ಮಾಡಿತ್ತು. ಈ ವೇಳೆ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು. ಈ ಸಂಬಂಧ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply