ಧರ್ಮಸ್ಥಳ: ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Share the Article

ಧರ್ಮಸ್ಥಳದ ನೇತ್ರಾವತಿ ಸೇತುವೆ ಬಳಿಯ ಕಾಡಿನಲ್ಲಿ ಅಪರಿಚಿತ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಇಂದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ಲೋಲಾಕ್ಷ ಪಿಎಸ್ಐ ಜೊತೆಗೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶವವನ್ನು ಪರಿಶೀಲಿಸಿದ ನಂತರ ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿಗೆ ಸುಮಾರು 40 ರಿಂದ 50 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ. ಅಪರಿಚಿತ ಶವದ ಬಗ್ಗೆ ತಿಳಿದವರು ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ಕೋರಲಾಗಿದೆ.

Leave A Reply