ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

Share the Article

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಬಂಧಿತ ಆರೋಪಿಗಳು, ಉಳಿದಂತೆ ಬರ್ತ್‌ಡೇ ಬಾಯ್ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ತಲೆಮರೆಸಿಕೊಂಡ ಆರೋಪಿಗಳು.

ಮೇ.30ರಂದು ಪಡುಬಿದ್ರಿಯ ಜಿತೇಂದ್ರ ಶೆಟ್ಟಿ ಮನೆಯಲ್ಲಿ ಏಳು ಮಂದಿ ತಲ್ವಾರ್ ಬಳಸಿ ನಿರಂಜನ್ ಶೆಟ್ಟಿಗಾರ್ ನ ಹುಟ್ಟು ಹಬ್ಬ ಆಚರಿಸಿದ್ದರು. ಬರ್ತ್‌ಡೇ ಸೆಲೆಬ್ರೇಷನ್‌ನ ಈ ತಲ್ವಾರ್ ವೀಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಸ್ಪಿ ಗಮನಕ್ಕೆ ಬಂದಿದೆ. ತಕ್ಷಣ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪಡುಬಿದ್ರಿ ಎಸೈ ಅವರಿಗೆ ಎಫ್‌ಐಆರ್ ದಾಖಲಿಸುವಂತೆ
ನಂತರ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿರುವ ಜಾರಪ್ಪ ಮನೆಗೆ ದಾಳಿ ಮಾಡಿದ ಪೊಲೀಸ್ ತಂಡ ಅಲ್ಲಿದ್ದ ಮೂವರನ್ನು ಬಂಧಿಸಲಾಗಿದೆ.

ಉಳಿದಂತೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸೈ ಪುರುಷೋತ್ತಮ್ ತಂಡ ಆರೋಪಿಗಳಿಗಾಗಿ ಬಲೆ ಬೀಸಿದೆ.

Leave A Reply