ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

Share the Article

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು. ಇದೀಗ ಅದರಂತೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕನ್ನಡದಲ್ಲಿಯೇ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply