ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ!

Share the Article

ದಾವಣಗೆರೆ : ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಬಿತ್ತನೆಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಕೆಲವು ಕಡೆ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವ ಯತ್ನ ನಡೆದಿದ್ದು, ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Leave A Reply