ರಾಜ್ಯದಲ್ಲಿ ಮತ್ತೊಬ್ಬ ನಗರಸಭೆ ಸದಸ್ಯನ ಬರ್ಬರ ಹತ್ಯೆ !! | ದೇವಾಲಯದ ಮುಂಭಾಗವೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

Share the Article

ಮತ್ತೊಬ್ಬ ಕಾಂಗ್ರೆಸ್ ನಗರಸಭೆ ಸದಸ್ಯನ ಬರ್ಬರ ಕೊಲೆಗೆ ರಾಜ್ಯದ ಜನತೆ ಬೆಚ್ಚಿ ಬಿದ್ದಿದೆ. ಹಾಸನ ಬಳಿಕ ಕೋಲಾರ ನಗರದಲ್ಲಿಂದು ನಗರಸಭೆ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗವೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲೆ ಮಾಡಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಅವರನ್ನು ಸಂಚು ಹಾಕಿ ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಮನೆ ಎದುರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ ಮತ್ತು ಆಪ್ತನಾಗಿದ್ದ ಇವರನ್ನು ಮುಂಜಾನೆ ನಾಲ್ಕು ಜನರ ತಂಡ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಡಿವೈಎಸ್‍ಪಿ ಗೌರಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತನ್ನ ಬಲಗೈ ಬಂಟನ ಕೊಲೆ ವಿಚಾರ ತಿಳಿದ ಕೊತ್ತೂರು ಮಂಜುನಾಥ್ ಅವರು ಜಾಲಪ್ಪ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Leave A Reply