ಪುತ್ತೂರು: ಇನ್ನು ಮುಂದೆ ಹಿಜಾಬ್ ಪರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೆ ಸಸ್ಪೆಂಡ್!
ಪುತ್ತೂರು: ಹೈಕೋರ್ಟ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಆದೇಶದ ವಿರುದ್ಧ ಹಿಜಾಬ್ ಪರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಇನ್ನು ಮುಂದೆ ಸಸ್ಪೆಂಡ್ ಮಾಡಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದ್ದು, ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಪಾಠ ಮುಖ್ಯವೋ, ಧಾರ್ಮಿಕತೆ ಮುಖ್ಯವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಹಿಜಾಬ್ ಕುರಿತ ವಾಸ್ತವಿಕತೆಯನ್ನು ಹೇಳಿದ್ದಾರೆ. “ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ಇಲ್ಲಿ ಕಾನೂನನ್ನು ಉಲ್ಲಂಘಿಸಿ ಬಿಡುವುದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನತರಹ ಆಗುತ್ತಾರೆ. ಇಲ್ಲಿ ಏರ್ಪೋಟ್ ನಿಂದ ಇಳಿಯುವಾಗ ಗನ್ ಮ್ಯಾನ್ ಜೊತೆಗೆ, ಇದ್ದಿದ್ದರೂ ಬಂಸಲ್ ಗಳನ್ನು ಮುಂದಕ್ಕೆ ಬಿಟ್ಟುಕೊಂಡು ನಡೆಯುವವರನ್ನು ನಾನು ಕಂಡಿದ್ದೇನೆ. ಅದೇ ಜನ ಅಲ್ಲಿ ಸೌದಿಗೆ ಹೋದರೆ, ಸೀದಾ ಒಬ್ರೇ ಬೆಕ್ಕಿನ ಥರ ನಡೆದು ಹೋಗ್ತಾರೆ. ಇದನ್ನು ನಾನುಸ್ವತಹಾ ಕಂಡಿದ್ದೇನೆ. ಯಾಕೆಂದರೆ ನಮ್ಮಲ್ಲಿ ಅಷ್ಟೊಂದು ಸ್ವಾತಂತ್ರವಿದೆ. ಮೊದಲು ನಾವು ಅದನ್ನು ಅರ್ಥಮಾಡಿಕೊಳ್ಳಬೇಕು. ಆಗ ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ, ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ ಎಂದು ಖಾದರ್ ಅವರು ಕಿಡಿಕಾರುತ್ತಲೇ ಬುದ್ಧಿಮಾತು ಹೇಳಿದ್ದರು”.
ಸಹಿಸುವುದಿಲ್ಲ. ಸರಕಾರಿ ಕಾಲೇಜು ಸರ್ವ ಧರ್ಮೀಯರಿಗೆ ಪಾಠ, ಪ್ರವಚನ ನೀಡುವ ಕೇಂದ್ರವಾಗಿದೆ. ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುವುದು ಎಂದು
ಅವರು ಸ್ಪಷ್ಟಪಡಿಸಿದರು.
ಅಲ್ಲದೆ, ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಲೇಜಿಗೆ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಎಫ್.ಐ.ಆರ್ ದಾಖಲಾಗಿದ್ದು, ಆರೋಪಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಎಸ್.ಪಿ ಮತ್ತು ಡಿವೈಎಸ್ಪಿ ಗೆ ಸೂಚಿಸಿದ್ದೇನೆ. ಪತ್ರಕರ್ತರು ಈಗಾಗಲೇ ಮನವಿ ಮತ್ತು ಪ್ರತಿಭಟನೆಯನ್ನೂ ಮಾಡಿದ್ದಾರೆ. ಗೃಹಸಚಿವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಭರವಸೆಯನ್ನೂ ನೀಡಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.