ರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಣೆ ! ಎಂದು ಯಾವಾಗ ?

Share the Article

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಜೂನ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

Leave A Reply