ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ.
ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಸಂಬಳ: 50000-140000 ರೂ ಪ್ರತಿ ತಿಂಗಳು
ಹುದ್ದೆ , ಹುದ್ದೆ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ ವೇತನ:
ಉಪ ಪ್ರಧಾನ ವ್ಯವಸ್ಥಾಪಕರು, 4 ಹುದ್ದೆ, ಡಿಪ್ಲೊಮಾ, ಡಿಪ್ಲೊಮಾದಲ್ಲಿ ಎಂಜಿನಿಯರಿಂಗ್, 45, 140000 ರೂ ಮಾಸಿಕ
ವ್ಯವಸ್ಥಾಪಕ , 6, ಡಿಪ್ಲೊಮಾ, ಎಂಜಿನಿಯರಿಂಗ್ನಲ್ಲಿ ಪದವಿ , 40, 75000 ರೂ ಮಾಸಿಕ
ಕಾರ್ಮಿಕ ಕಲ್ಯಾಣ ಅಧಿಕಾರಿ, 1, ಪದವಿ, ಸ್ನಾತಕೋತ್ತರ ಪದವಿ , 35, 50000 ರೂ ಮಾಸಿಕ
ವಯೋಮಿತಿ ಸಡಿಲಿಕೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ: ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್ಲೈನ್, ಆನ್ಲೈನ್
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 8, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜುಲೈ 7 2022
ಅಧಿಕೃತ ವೆಬ್ಸೈಟ್: english.bmrc.co.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
-ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ತಲುಪಬೇಕು.
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027