Home ದಕ್ಷಿಣ ಕನ್ನಡ ಬಾಹುಬಲಿ ಖ್ಯಾತಿಯ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣಕರ ಹತ್ಯೆಗೆ ಸಂಚು ಹಿನ್ನೆಲೆ, ಗೃಹಸಚಿವರಿಗೆ...

ಬಾಹುಬಲಿ ಖ್ಯಾತಿಯ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣಕರ ಹತ್ಯೆಗೆ ಸಂಚು ಹಿನ್ನೆಲೆ, ಗೃಹಸಚಿವರಿಗೆ ದೂರು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹಲವು ದಿನಗಳಿಂದ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಮತ್ತು ಮುತ್ತಪ್ಪ ರೈ ಅವರ ಒಂದು ಕಾಲದ ಸಹವರ್ತಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ನಡುವೆ ವೈಮನಸ್ಸು ಮೂಡಿದ್ದು ಗಲಾಟೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚಿನ ವದಂತಿ ಬೆನ್ನಲ್ಲೇ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನು ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದಾರೆ. ಇದೇ ವಿಚಾರಕ್ಕೆ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಒಂದೊಮ್ಮೆ ಅನೂನ್ಯವಾಗಿದ್ದ ಮುತ್ತಪ್ಪ ರೈ, ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ಕೊನೆಗೆ ತಮ್ಮ ತಮ್ಮಲ್ಲೇ ಮನಸ್ತಾಪ ಮೂಡಿಸಿಕೊಂಡಿದ್ದರು. ಮುತ್ತಪ್ಪ ರೈ ಸಾವಿನ ಮೊದಲೇ ರಾಕೇಶ್ ಮಲ್ಲಿಗೂ ರೈ ಗೂ ಅನಂತರ ಮೂಡಿ ಆದೊಂದು ವಿವಾದ ಉಂಟಾಗಿತ್ತು.

ಅತ್ತ ಗುಣರಂಜನ್ ಶೆಟ್ಟಿ ಜಯ ಕರ್ನಾಟಕ ಸಂಘಟನೆಯಿಂದ ಹೊರಬಂದು ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದ್ದರು. ಅಲ್ಲದೇ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇದೇ ಕಾರಣಕ್ಕೆ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ಮನ್ಮಿತ್ ರೈ, ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಹೇಳಿಕೆಗಳನ್ನು ಪೊಲೀಸರು ಗಮನಿಸುತ್ತಿದ್ದು, ತನಿಖೆಯ ಆಳ ಮತ್ತು ವೇಗ ಗೃಹಸಚಿವರ ನಿರ್ಧಾರದ ಮೇಲೆ ನಿಂತಿದೆ.