ದ್ವಿತೀಯ ಪಿಯು ಫಲಿತಾಂಶ ದಿನಾಂಕ ಪ್ರಕಟ! ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಬರಲಿದೆ ಫಲಿತಾಂಶದ ಸಂದೇಶ

Share the Article

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಉನ್ನತ ಮೂಲಗಳು ಖಚಿತಪಡಿಸಿವೆ.

ಮೇ. 18 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಕರ್ನಾಟಕದಲ್ಲಿ ಮುಗಿದಿದ್ದವು. ಪರೀಕ್ಷೆ ಮುಗಿದ ಕೂಡಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೌಲ್ಯಮಾಪನಕ್ಕೆ ಚಾಲನೆ ನೀಡಲಾಯಿತು. ನೋಂದಣಿ ಮಾಡಿದ ಪ್ರಾಧ್ಯಾಪಕರು ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಪರೀಕ್ಷೆ ಫಲಿತಾಂಶ ಪ್ರಕಟದಲ್ಲಿ ವಿಳಂಬವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇದರ ಜತೆಗೆ www.karresults.nic.in ನಲ್ಲೂ ಫಲಿತಾಂಶ ನೋಡಬಹುದು. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಫಲಿತಾಂಶ ಸಂದೇಶ ಬರಲಿದೆ. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Leave A Reply