ಮಂಗಳೂರು:ಪ್ರತಿಭಟನೆಯ ನೆಪದಲ್ಲಿ ಐಟಿ ಕಚೇರಿಗೆ ಮುತ್ತಿಗೆ ಯತ್ನ!! ಕಾಂಗ್ರೆಸ್ ನ ಘಟಾನುಘಟಿಗಳ ಸಹಿತ ಹಲವರು ವಶಕ್ಕೆ

Share the Article

ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಇಡಿ ಕಚೇರಿಯನ್ನು ದುರ್ಬಳಕೆ ಮಾಡುತ್ತಿದೆ, ಆ ಮೂಲಕ ಕಾಂಗ್ರೆಸ್ ನಾಯಕರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪ್ರತಿಭಟಿಸಿ, ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರಿನ ಫಳ್ನೀರ್ ನಲ್ಲಿರುವ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮಾನಾಥ ರೈ, ಯುವ ನಾಯಕ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರಿದ ಪ್ರತಿಭಟನೆಯಲ್ಲಿ ಐಟಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆದಾಗ ಮಧ್ಯ ಪ್ರವೇಶಿಸಿದ ಪೊಲೀಸರು ನಾಯಕರ ಸಹಿತ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ಬಳಿಕ ಬಿಡುಗಡೆಗೊಳಿಸಿದರೆಂದು ತಿಳಿದುಬಂದಿದೆ.

Leave A Reply