ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಜೂ.18ರಂದು ಗ್ರಾಮವಾಸ್ತವ್ಯ ಮಾಡಿದರು. ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಆಲಂಕಾರಿನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಗ್ರಾಮ ವಾಸ್ತವ್ಯ ಮಾಡಲಿದ್ದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಿತು.  ಸಚಿವ ಎಸ್.ಅಂಗಾರ  ಮಾತನಾಡಿದರು.ಜಿಲ್ಲಾಧಿಕಾರಿಯವರು ಮಾತನಾಡಿ, ಜನರ ಸಮಸ್ಯೆ ಇತ್ಯರ್ಥ ಕ್ಕೆ ಪ್ರಯತ್ನಿಸಲಾಗುವುದು ಎಂದರು.

 

ಕಡಬ ತಹಶೀಲ್ದಾರ್ ಅನಂತ ಶಂಕರ ಸ್ವಾಗತಿಸಿ, ಸಹಾಯಕ ಆಯುಕ್ತ ಗಿರೀಶ್ ನಂದನ್ ಪ್ರಾಸ್ತಾವಿಕ ಮಾತನಾಡಿದರು.

ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಆಚಾರ್ಯ, ಆಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೂಪಾಶ್ರಿ , ಡಿಡಿಎಲ್ ಆರ್ ನಿರಂಜನ್, ತಾ.ಪಂ.ಇಒ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ತವ್ಯದಲ್ಲಿ ಉಪಸ್ಥಿತರಿದ್ದರು.

Leave A Reply

Your email address will not be published.