ಸುಳ್ಯ : ಬಿಜೆಪಿ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ್ ದಿವಸ್

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ. ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು.

 

ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾತನಾಡಿ “ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆಧರ್ಶಗಳನ್ನು ಯುವಕರು ಸ್ಮರಿಸಿಕೊಂಡು ನಡೆಯಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಸಿ. ಎ. ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ, ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಶೀಲಾ ಅರುಣ್ ಕುರುಂಜಿ, ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ಜಿನಪ್ಪ ಪೂಜಾರಿ, ನಗರ ಪಂಚಾಯತ್ ಸದಸ್ಯರಾದ ಬೂಡು ರಾಧಾಕೃಷ್ಣ ರೈ, ಸುಧಾಕರ್ ಕುರುಂಜಿ ಭಾಗ್, ಶಶಿಕಾಲ ದುಗಲಡ್ಕ, ಬುದ್ಧ ನಾಯಕ್ ಹಳೇಗೇಟು,ಆಲೆಟಿ ಮಹಾ ಶಕ್ತಿ ಕೇಂದ್ರ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಕೊಲ್ಚಾರ್, ಪ್ರಶಾಂತ್ ಕಾಯರ್ತೋಡಿ, ಗುರು ಸ್ವಾಮಿ ಬೀರಮಂಗಲ, ಚಂದ್ರಶೇಖರ ನೆಡಿಲ್ ಮತ್ತು ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.