ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಿಹಿಸುದ್ದಿ, 40,000ರೂ.ಗಳ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣ ಉದ್ದಿಮೆ ಸ್ಥಾಪಿಸಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಅನುದಾನ ನೀಡಲು ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ (PMFME)ಯೋಜನೆಯಡಿಯಲ್ಲಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಸ್ಥಾಪಿಸಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ರೂ.40,000/-ಗಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಪ್ರದೇಶದ ಅರ್ಜಿದಾರರು ಗ್ರಾಮ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಯ ದೂರವಾಣಿ ಸಂಖ್ಯೆ:9535848675 ಹಾಗೂ ನಗರ ಪ್ರದೇಶದ ಅರ್ಜಿದಾರರು ನಗರ ಸ್ಥಳೀಯ ಸಂಸ್ಥೆಗಳು /ಮುನಿಸಿಪಾಲಿಟಿಗಳ ಮುಖ್ಯಸ್ಥರ ದೂರವಾಣಿ ಸಂಖ್ಯೆ:9448759715 ಯನ್ನು ಸಂಪರ್ಕಿಸುವುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.