ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ !!| ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Share the Article

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆಯ ಆಟ ಶುರುವಾಗಿದೆ. ಈ ನಡುವೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು ಜೂ.25 ಮತ್ತು 26ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಧಾರಾಕಾರ ಮಳೆ, ಗುಡುಗು ಸಹಿತ ಗಾಳಿ ಕೂಡ ಇರಲಿದೆ. ವಾತಾವರಣ ಇದೇ ರೀತಿ 3 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave A Reply