ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯ ಕೈ ಮೇಲೆ ಹರಿದ ಲಾರಿ ಚಕ್ರ!

ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯೊಬ್ಬರ ಕೈ ಮೇಲೆ ಲಾರಿಯೊಂದರ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಜಂಕ್ಷನ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

 

ಗಾಯಗೊಂಡವರು ಮುಹಮ್ಮದ್ ಹನೀಫ್‌ರ ಪತ್ನಿ ಮರಿಯಮ್ಮ (೪೭) ಎಂದು ತಿಳಿದು ಬಂದಿದೆ.

ಮುಹಮ್ಮದ್ ಹನೀಫ್ ಸೋಮವಾರ ಮಧ್ಯಾಹ್ನ 1ಕ್ಕೆ ಕೆಪಿಟಿಯ ಪೆಟ್ರೋಲ್ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕಿಸಿ ವಿಟ್ಲ ಕಡೆಗೆ ಹೋಗಲು ರಾಷ್ಟ್ರೀಯ ಹೆದ್ದಾರಿ ೬೬ ಪ್ರವೇಶಿಸಿದ್ದರು ಎನ್ನಲಾಗಿದೆ. ಆಗ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕೊಂದು ಹನೀಫ್‌ರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನ ಹಿಂಬದಿ ಕುಳಿತಿದ್ದ ಮರಿಯಮ್ಮ ರಸ್ತೆಗೆ ಎಸೆಯಲ್ಪಟ್ಟರು. ಅದೇ ವೇಳೆ ಕೆಪಿಟಿ ಕಡೆಯಿಂದ ನಂತೂರು ಕಡೆಗೆ ಚಲಿಸುತ್ತಿದ್ದ ಲಾರಿಯು ಮರಿಯಮ್ಮರ ಕೈಯ ಮೇಲೆ ಹರಿದು ಹೋಗಿದೆ ಎಂದು ತಿಳಿದು ಬಂದಿದೆ.

ಇದರಿಂದ ಮರಿಯಮ್ಮರಿಗೆ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕದ್ರಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.