Home ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಘರ್ಜಿಸಿದ ಜೆಸಿಬಿ : 100 ಕೋಟಿ ರೂ.ಮೌಲ್ಯದ ಬಿಡಿಎ ಆಸ್ತಿ ವಶ !

ಸಿಲಿಕಾನ್ ಸಿಟಿಯಲ್ಲಿ ಘರ್ಜಿಸಿದ ಜೆಸಿಬಿ : 100 ಕೋಟಿ ರೂ.ಮೌಲ್ಯದ ಬಿಡಿಎ ಆಸ್ತಿ ವಶ !

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಬಿಡಿಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಚ್ ಬಿ ಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ. ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್ ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

ಈ ಕಟ್ಟಡಗಳನ್ನು ನೆಲಸಮ ಮಾಡಲು ಈ ಹಿಂದೆ ಮೂರ್ನಾಲ್ಕು ಬಾರಿ ಅಧಿಕಾರಿಗಳು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200 ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ನೆಲಸಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.