ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

Share the Article

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ಇವತ್ತು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1 ರಿಂದ ನಾಲ್ಕು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave A Reply