Home latest ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈಟೆನ್ಶನ್ ತಂತಿ| ವಿದ್ಯುತ್ ಸ್ಪರ್ಶಿಸಿ ಎಂಟು ಕಾರ್ಮಿಕರ ಜೀವಂತ ದಹನ!

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈಟೆನ್ಶನ್ ತಂತಿ| ವಿದ್ಯುತ್ ಸ್ಪರ್ಶಿಸಿ ಎಂಟು ಕಾರ್ಮಿಕರ ಜೀವಂತ ದಹನ!

Hindu neighbor gifts plot of land

Hindu neighbour gifts land to Muslim journalist

ಹೈ ಟೆನ್ಶನ್ ತಂತಿಯೊಂದು ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಪಲ್ಲಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ಇಂದು ಬೆಳಗ್ಗೆ ನಡೆದಿದೆ. ಗುಡಂಪಲ್ಲಿಯಿಂದ ಆಟೋದಲ್ಲಿ ಕಾರ್ಮಿಕರು ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಭೀಕರ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಇದೆ.

ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ.