ಮಂಗಳೂರು: ಮಳೆ ನೀರಿಗೆ ಕೊಚ್ಚಿಕೊಂಡು ಹೋದ ವ್ಯಕ್ತಿ ಸಾವು!! ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

Share the Article

ಮಂಗಳೂರು:ನಗರದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಅಂಬಿಕಾ ಸ್ಟೋರ್ ಬಳಿಯ ಸರಕಾರಿ ಬಾವಿಯ ಬಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೆ ಎಸ್ ರಾವ್ ನಗರದ ಪೊಲೀಸ್ ಕ್ವಾಟ್ರಸ್ ಬಳಿಯ ನಿವಾಸಿ ಸುನಿಲ್ (46) ಎಂದು ಗುರುತಿಸಲಾಗಿದ್ದು,ಇಂದು ಮುಂಜಾನೆ ವೇಳೆಗೆ ಘಟನೆ ಬೆಳಕಿಗೆ ಬಂದಿದ್ದು,ನಿನ್ನೆ ರಾತ್ರಿ ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮುಲ್ಕಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Leave A Reply