ONGC ಯಲ್ಲಿ ಉದ್ಯೋಗವಕಾಶ| ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನಾಂಕ, ಮಾಸಿಕ ವೇತನ ರೂ.40,000/-

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆ:7 ಜ್ಯೂನಿಯರ್ ಕನ್ಸಲ್ವೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 1,2022 ರಿಂದ ಜುಲೈ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ : ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ವೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 24,2022ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ : ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ವೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ping_cwssibs@ongc.co.in ಅಥವಾ swami_sr@ongc.co.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 1 ರಿಂದ ಜುಲೈ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಗಾಗಿ ಈ ಕೆಳಗಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ.

Leave A Reply

Your email address will not be published.