

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು, ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ನಿಷೇಧಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಆಳವಾದ ಬಾವಿಯ ನೀರಿನಿಂದ ಹಸಿರು ಹೈಡ್ರೋಜನ್ ತಯಾರಿಸಬಹುದು ಮತ್ತು ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ.
ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಗಡ್ಕರಿ ಒತ್ತಿ ಹೇಳಿದ್ದಾರೆ. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರದಂದು ಡಾ. ಪಂಜಾಬ್ರಾವ್ ದೇಶ್ಮುಖ್ ಕೃಷಿ ವಿಶ್ವವಿದ್ಯಾಲಯದಿಂದ ಗಡ್ಕರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಗಡ್ಕರಿ ಪೆಟ್ರೋಲ್ ನಿಷೇಧದ ಕುರಿತಂತೆ ಮಾತುಗಳನ್ನಾಡಿದ್ದಾರೆ.













