ಹಿಂದೂ ಯುವತಿಯರನ್ನು ಚುಡಾಯಿಸಿದ ಮುಸ್ಲಿಂ ಯುವಕ, ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ!

Share the Article

ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ.

ಹಲ್ಲೆಗೊಳಗಾದ ಹಿಂದೂ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ.

ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಹಿಂದೂ ಯುವಕ, ‘ಏಕೆ ಚುಡಾಯಿಸುತ್ತೀರಾ?’ ಎಂದು ಪ್ರಶ್ನಿಸಿದ್ದಾನೆ. ಈ ವೇಳೆ ಹಿಂದೂ ಯುವಕ ಹರ್ಷನ ಮೇಲೆ ಮುಸ್ಲಿಂ ಯುವಕರು ಮುಗಿಬಿದ್ದಿದ್ದಾರೆ.

ಎಂಟು ಮಂದಿ ಯುವಕರು ಹರ್ಷನ ಮೇಲೆ ಹಲ್ಲೆ ನಡೆಸಿ, ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಹಲ್ಲೆಗೊಳಗಾದ ಯುವಕ ಹರ್ಷನನ್ನು ಚಿಕಿತ್ಸೆಗೆಂದು
ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರ್ಷ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದು, ಐಟಿಐ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Leave A Reply