Shocking News | ಆರ್‌ ಎಸ್ಎಸ್ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಬಾಂಬ್ ದಾಳಿ

ಮುಂಜಾನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.

ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ವ್ಯಕ್ತಿಗಳು ಗಾಯಗೊಂಡ ಬಗ್ಗೆ ವರದಿಯಾಗಿಲ್ಲ.

ಕೇರಳ ಬಿಜೆಪಿ ನಾಯಕ ಟಾಮ್ ವಡಕ್ಕನ್ ಬಾಂಬ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ಆಡಳಿತದ ವೈಫಲ್ಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಇಂತಹ ದಾಳಿಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಕಣ್ಣೂರಿನಂತಹ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ಆದರೆ ರಾಜ್ಯ ಸರ್ಕಾರ ಅದರ ಬಗ್ಗೆ ಯೋಚನೆ ಮಾಡಲ್ಲ, ಅವರ ನಿರ್ಲಕ್ಷ್ಯ ದಾಳಿಕೋರರಿಗೆ ಸಹಕಾರಿಯಾಗಿದೆ ಎಂದರು. ರಾಜ್ಯದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದರು.

“ಸಾಮಾಜಿಕ ಸಂಘಟನೆಗಳ ಮೇಲೆ ಬಾಂಬ್ ಎಸೆಯುವ ಮಟ್ಟಕ್ಕೆ ಕಾನೂನು ಕೈಗೆ ತಗೊಂಡಿರುವುದು, ಆಘಾತಕಾರಿ ಮತ್ತು ದುರದೃಷ್ಟಕರವಾಗಿದೆ ಮತ್ತು ನಾಗರಿಕ ಸಮಾಜದಲ್ಲಿ ಅದು ಇಂತಹ ಘಟನೆ ನಡೆಯಬಾರದು. ಬಿಜೆಪಿ ನಾಯಕ ಟಾಮ್ ವಡಕ್ಕನ್ ಹೇಳಿದ್ದಾರೆ.

Leave A Reply

Your email address will not be published.