ಪುದುಬೆಟ್ಟುವಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ

Share the Article

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಕೆಮ್ಮಟ ಶಾಲೆಯ ಹತ್ತಿರದ ನಿವಾಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರು ವಿಜಯಾನ್(60).

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹತ್ತಿರದ ರಬ್ಬರ್ ತೋಟವೊಂದರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇವರು ಮನೆಯಲ್ಲಿ ಕೃಷಿಕರಾಗಿದ್ದು ಸಣ್ಣ ಪುಟ್ಟ ವಿಚಾರದಲ್ಲಿ ಮನಸ್ತಾಪ ಹೊಂದಿದ್ದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಇವರಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಗಂಡು ಮಕ್ಕಳು ಇದ್ದು, ಎಲ್ಲಾ ಮಕ್ಕಳಿಗೂ ವಿವಾಹವಾಗಿದೆ ಎಂದು ತಿಳಿದುಬಂದಿದೆ.

Leave A Reply