ಪುತ್ತೂರು : ಗುಡ್ಡ ಕುಸಿದು ಮನೆ ಧ್ವಂಸವಾದ ಸ್ಥಳಕ್ಕೆ ಶಾಸಕರ ಭೇಟಿ

Share the Article

ಪುತ್ತೂರು: ಭಾರೀ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಪಡ್ನೂರು ಗ್ರಾಮದ ಕುಂಬಾಡಿಯಲ್ಲಿ ಗುಡ್ಡ ಕುಸಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ದ್ವಂಸವಾದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಜು.14ರಂದು ಬೆಳಿಗ್ಗೆ ಭೇಟಿ ನೀಡಿದ್ದಾರೆ.

ಅವರು ನೆಹರುನಗರ ನಿವಾಸಿ ರಾಮಭಟ್‌ ಎಂಬವರಿಗೆ ಸೇರಿದ ನಿರ್ಮಾಣ ಹಂತದ ಮನೆಯ ಮೇಲೆ ಜು.11ರಂದು ಬೆಳಿಗ್ಗೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮನೆ ಸಂಪೂರ್ಣ ದ್ವಂಸವಾಗಿತ್ತು. ಗುಡ್ಡ ಕುಸಿದರಿಂದ ರಸ್ತೆಯ ಮತ್ತೊಂದು ಬದಿಯಲ್ಲಿರುವ ಮನೆಯವರು ಆತಂಕದಲ್ಲಿ ಘಟನೆಯ ಕುರಿತು ಮಾಹಿತಿ ಪಡೆದ ಶಾಸಕ ಸಂಜೀವ ಮಠಂದೂರು ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬನ್ನೂರು ಗ್ರಾ.ಪಂ ಸದಸ್ಯ ಶೀನಪ್ಪ, ಬಿಜೆಪಿ ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ಶೌಕತ್ ಆಲಿ ಉಪಸ್ಥಿತರಿದ್ದರು.

Leave A Reply