Home Education SSLC ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಮಾಹಿತಿ

SSLC ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಸರಳಗೊಳಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ವಿನ್ಯಾಸ ಹಾಗೂ ನೀಲನಕಾಶೆಯನ್ನು ಪರಿಷ್ಕರಿಸಲಾಗಿತ್ತು. 2019-20ನೇ ಸಾಲಿನಲ್ಲಿ ಪ್ರಶ್ನೆಪತ್ರಿಕೆ ಸ್ವರೂಪದಲ್ಲಿ ಅಲ್ಪ ಬದಲಾವಣೆ ಮಾಡಿ, ಕಠಿಣತೆ ಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೋವಿಡ್ 2ನೇ ಅಲೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಠಿಯಿಂದ ಪರೀಕ್ಷೆಯನ್ನು ಸರಳೀಕರಿಸಿ, ಎರಡು ದಿನಗಳಲ್ಲಿ ಬಹುಆಯ್ಕೆ ಪ್ರಶ್ನೆ ಆಧರಿತವಾಗಿ ನಡೆಸಲಾಗಿತ್ತು.

2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಶಾಲೆಗಳು ಭೌತಿಕವಾಗಿ 2-3 ತಿಂಗಳು ವಿಳಂಬವಾಗಿ ಪ್ರಾರಂಭಗೊಂಡ ಕಾರಣ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶೇ.20ರಷ್ಟು ಪಠ್ಯವಸ್ತು ಕಡಿತಗೊಳಿಸಲಾಗಿದ್ದ ಹಿನ್ನಲೆಯಲ್ಲಿ 2019-20ನೇ ಸಾಲಿನಲ್ಲಿದ್ದಂತೆಯೇ ಪ್ರಶ್ನೆಪತ್ರಿಕೆಯ ಮಾದರಿಯಲ್ಲಿ ಬದಲಾವಣೆಯನ್ನು ಮಾಡದೇ, ಪ್ರಶ್ನೆ ಪತ್ರಿಕೆಯ ಕಠಿಣತೆಯ ಮಟ್ಟವನ್ನು ಸುಲಭ ಪ್ರಶ್ನೆಗಳು ಶೇ.40ರಷ್ಟು, ಸಾಧಾರಣ ಪ್ರಶ್ನೆಗಳು ಶೇ.50ರಷ್ಟು, ಕಠಿಣ ಪ್ರಶ್ನೆಗಳು ಶೇ.10 ಮಾಡಿ ಆದೇಶಿಸಲಾಗಿತ್ತು.

ಇದೀಗ 2022-23ನೇ ಶೈಕ್ಷಣಿಕ ವರ್ಷಕ್ಕೆ ದಿನಾಂಕ 16-05-2022ರಿಂದಲೇ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಭೌತಿಕವಾಗಿ ಪ್ರಾರಂಭಿಸಲಾಗಿರುವ ಹಿನ್ನಲೆಯಲ್ಲಿ, 2022-23ನೇ ಸಾಲಿನಿಂದ ಶಾಲಾ ವಿದ್ಯಾರ್ಥಿಗಳಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳ ಅನುಸಾರ, ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿರುವುದನ್ನು ಯಥಾ ರೀತಿ ಮುಂದುವರೆಸಿ ದಿನಾಂಕ 30-06-2022ರಂದು ಸುತ್ತೋಲೆ ಹೊರಡಿಸಲಾಗಿರುತ್ತದೆ.

ಈ ಹಿನ್ನಲೆಯಲ್ಲಿ 2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಯಾವುದೇ ಬದಲಾವಣೆ ಮಾಡದೇ, ಪ್ರಸಕ್ತ 2022-23ನೇ ಸಾಲಿನಿಂದ ಅದೇ ವರ್ಗೀಕರಣದಂತೆ ಯಥಾ ರೀತಿ ಮುಂದುವರೆಸಿದೆ ಎಂದು ತಿಳಿಸಿದೆ.