ಭಾರತದ 15ನೇ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇಂದು 10.15 ಕ್ಕೆ ಭಾರತದ 15ನೇ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಅವರು ಇಂದು ಪ್ರಮಾಣಚವನ ಸ್ವೀಕರಿಸಿದರು. ದೆಹಲಿಯ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು.

 

ಇದಾದ ನಂತರ 21 ಬಾರಿ ಕುಶಾಲುತೋಪು ಹಾರಿಸಿ ಗನ್ ಸೆಲ್ಯೂಟ್ ನೀಡಲಾಯಿತು. ಇದಕ್ಕೂ ಮೊದಲು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು.

64 ವರ್ಷದ ದೌಪದಿ ಮುರ್ಮು ಅವರು ಎರಡನೇ ಮಹಿಳಾ ರಾಷ್ಟ್ರಪತಿ ಹಾಗೂ ಅತ್ಯಂತ ಕಿರಿಯ ರಾಷ್ಟ್ರಾಧ್ಯಕ್ಷ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ದ್ರೌಪದಿ ಮುರ್ಮು ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ದೇಶದ ಅತ್ಯುನ್ನತ ಹುದ್ದೆಗೇರುತ್ತಿರುವ ಮೊದಲ ಆದಿವಾಸಿ ಮಹಿಳೆ.

Leave A Reply

Your email address will not be published.