ಪ್ರವೀಣ್ ನೆಟ್ಟಾರು ಹತ್ಯೆ ,ದುಷ್ಕರ್ಮಿಗಳನ್ನು ಮಟ್ಟ ಹಾಕಲು ಕಾರ್ಯಪ್ರವೃತ-ಸುನಿಲ್ ಕುಮಾರ್

Share the Article

ಪುತ್ತೂರು: ಬಿಜೆಪಿ ಪಕ್ಷದ ಮುಖಂಡ ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಸರಕಾರ ಇದನ್ನು ನೋಡಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು, ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಮೂರು ತಂಡಗಳು ಕೇರಳ, ಮಡಿಕೇರಿ, ಹಾಸನ ಭಾಗಕ್ಕೆ ತೆರಳಿವೆ ಎಂದು ಅವರು ತಿಳಿಸಿದ್ದಾರೆ.

Leave A Reply