ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಪುತ್ತೂರು ಕೆ.ಡಿ.ಪಿ. ಸಭೆ ರದ್ದು

ಪುತ್ತೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯನ್ನು ರದ್ದು ಮಾಡುವಂತೆ ಕೆಡಿಪಿ ಸಭೆ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರಿಗೆ ತಿಳಿಸಿದ್ದಾರೆ.

 

ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಮನಸ್ಸಿಗೆ ತುಂಬಾ ನೋವು ಉಂಟು ಮಾಡಿದೆ ಈ ಹಿನ್ನೆಲೆಯಲ್ಲಿ ತನ್ನೆಲ್ಲಾ ಕಾರ್ಯಕ್ರಮಗಳನ್ನು ನಾನು ರದ್ದುಗೊಳಿಸಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಮುಂದಿನ ದಿನಾಂಕ ತಿಳಿಸಲಾಗುವುದು

ತಾ.ಪಂ ಕೆಡಿಪಿ ಸಭೆಯು ಜು.26ರಂದು ನಡೆಸುವ ಕುರಿತು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಜು. 28ಕ್ಕೆ ಮುಂದೂಡಲಾಗಿತ್ತು. ಆದರೆ ಇದೀಗ ಶಾಸಕರು ಬೆಳಿಗ್ಗೆ ಕರೆ ಮಾಡಿ ಕೆಡಿಪಿ ಸಭೆಯನ್ನು ಮುಂದೂಡಿಸುವಂತೆ ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹೆಚ್ ಅವರು ತಿಳಿಸಿದ್ದಾರೆ.

Leave A Reply

Your email address will not be published.