“ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು” | ತೇಜಸ್ವಿ ಸೂರ್ಯ ಹೇಳಿಕೆ ವೈರಲ್?!

ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ರಾಜ್ಯದೆಲ್ಲೆಡೆ ಬುಗಿಲೆದ್ದ ಆಕ್ರೋಶ ತಣ್ಣಗಾಗುತ್ತಿಲ್ಲ. ಒಂದು ಕಡೆ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

 

ಇದೇ ವಿಚಾರ ಸಂಬಂಧ ತೇಜಸ್ವಿ ಸೂರ್ಯ ಅವರು ರಾಜೀನಾಮೆ ವಾಪಸ್ ಪಡೆಯುವಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‌ಗೆ ಕರೆ ಮಾಡಿದ್ದಾರೆ. ” ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು” ಎಂದು ಸಂದೀಪ್ ಜೊತೆ ಫೋನ್ ಮೂಲಕ ತೇಜಸ್ವಿ ಸೂರ್ಯ ಮಾತನಾಡಿದ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.

ಪ್ರವೀಣ್ ಹತ್ಯೆ ಖಂಡಿಸಿ ರಾಜ್ಯ ರಾಜಕಾರಣಿಗಳ ನಡೆಯನ್ನು ಖಂಡಿಸಿ, ನಿನ್ನೆ ಬೆಳಗ್ಗೆಯೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು ನಿಜಕ್ಕೂ ರಾಜ್ಯ ಮಾತ್ರವಲ್ಲ ಕೇಂದ್ರದಲ್ಲಿ ಸಂಚಲನ ಮೂಡಿಸಿದ್ದು ಸುಳ್ಳಲ್ಲ. ಈ ಸಂಬಂಧ ಜಿಲ್ಲೆಯ ಯುವ ಮೋರ್ಚಾದ ನಿರ್ಧಾರಕ್ಕೆ ತೇಜಸ್ವಿ ಸೂರ್ಯ ಕೂಡಾ ಹೊರತಾಗಿಲ್ಲ. ಹಾಗಾಗಿ ರಾಜೀನಾಮೆ ವಿಚಾರ ಕಿವಿಗೆ ಬೀಳುತ್ತಿದ್ದಂತೆ ತೇಜಸ್ವಿ ಸೂರ್ಯ ಸಂದೀಪ್‌ಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ರೆ ಕಲ್ಲು ಹೊಡೆಯಬಹುದಿತ್ತು” ಎಂದಿರುವ ತೇಜಸ್ವಿ ಸೂರ್ಯ ಹೇಳಿಕೆ ಈಗ ಭಾರೀ ಚರ್ಚೆಗೆ ಗುರಿಯಾಗಿದೆ.

Leave A Reply

Your email address will not be published.