Home Interesting ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು:ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿ ಹಾಗೂ ಇಂಧನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿಗಾಗಿ ಒಂದು ಬಾರಿಯ ಸಹಾಯವಾಗಿ ರೂ.80,000 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಂದಹಾಗೇ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಭವಿಷ್ಯ ನಿಧಿಗೆ ರೂ.20,000 ಲಕ್ಷ, ಬಿಎಂಟಿಸಿಗೆ ರೂ.25,000 ಲಕ್ಷ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ರೂ.25,000 ಲಕ್ಷ ಹಾಗೂ ಕಲ್ಯಾಣ ಕರ್ನಾಟಕ ನಿಗಮದ ನೌಕರರಿಗೆ ರೂ.10,000 ಲಕ್ಷವನ್ನು ಸೇರಿದಂತೆ 80,000 ಲಕ್ಷಗಳನ್ನು ರಾಜ್ಯ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ.

ಇಂಧನ ವೆಚ್ಚಕ್ಕಾಗಿ ರೂ.25,927.22 ಲಕ್ಷಗಳು ಸೇರಿದಂತೆ ಒಟ್ಟು ರೂ.1,05,927.22 ಲಕ್ಷಗಳನ್ನು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ. ಈ ಮೂಲಕ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಖುಷಿ ಸುದ್ದಿ ನೀಡಿದೆ.