Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ !!!

ಪ್ರಸಕ್ತ ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ (ಹೊಸ ಮತ್ತು ನವೀಕರಣ)ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ವೆಬ್‌ಸೈಟ್ https://scholarship.gov.in ಅಡಿಯಲ್ಲಿ ಸಲ್ಲಿಸುವುದು. ಮೆಟ್ರಿಕ್ ಪೂರ್ವದ ಹೊಸ ಹಾಗೂ ನವೀಕರಣ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ.ಮೀನ್‌ಸ್‌ನ ಹೊಸ ಹಾಗೂ ನವೀಕರಣ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ.

ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ರಾಷ್ಟ್ರ ವಿದ್ಯಾರ್ಥಿವೇತನ ಪೋರ್ಟಲ್ (ಎನ್.ಎಸ್.ಪಿ) ಮತ್ತು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್.ಎಸ್.ಪಿ) ಗಳಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್

https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ: 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಮತ ಅವರು ತಿಳಿಸಿದ್ದಾರೆ.

Leave A Reply

Your email address will not be published.