ಕಣಜದ ದಾಳಿಗೊಳಗಾದ ವ್ಯಕ್ತಿ ಮೃತ್ಯು

Share the Article

ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ.

ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave A Reply