ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ ಮೃತ್ಯು!

ಬಂಟ್ವಾಳ : ಕಾಲೇಜಿಗೆ ರಜೆ ಎಂದು ನೇತ್ರಾವತಿ ನದಿಗೆ ಹೋಗಿದ್ದ ವಿದ್ಯಾರ್ಥಿಯೋರ್ವ ನಿನ್ನೆ ಕಾಲು ಜಾರಿ ನೀರುಪಾಲಾಗಿದ್ದ. ಈತನನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾನೆ. ಈ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.

 

ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದು
ಸಾವು ಕಂಡ ವಿದ್ಯಾರ್ಥಿ.

ಈತ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ನೀರಿಗೆ ಬಿದ್ದ ಸಂದರ್ಭದಲ್ಲಿ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಿ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ನಿಧನ ಹೊಂದಿದ್ದಾನೆ.

Leave A Reply

Your email address will not be published.